ಮಿತ್ತಬೈಲು ಇರ್ಷಾದ್ ದಾರಿಮಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜಿ:ಜನಪ್ರಿಯ ಆಸ್ಪತ್ರೆ ಮತ್ತು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಉಸ್ತಾದ್
ಬಂಟ್ವಾಳ: ಮರ್ಹೂಂ ಶೈಖುನಾ ಮಿತ್ತಬೈಲು ಜಬ್ಬಾರ್ ಉಸ್ತಾದ್ ಅವರ ಪುತ್ರ ಇರ್ಷಾದ್ ದಾರಿಮಿ ಅವರು ಅನಾರೋಗ್ಯದಿಂದ ಮಂಗಳೂರು ಜನಪ್ರಿಯ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಕೆಲವು ದಿನಗಳ ಹಿಂದೆ ಇರ್ಷಾದ್ ದಾರಿಮಿ ಉಸ್ತಾದ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬೇಗ ಗುಣಮುಖರಾಗಬೇಕಾಗಿ ಎಲ್ಲರೂ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಮಾಡಲಾಗಿತ್ತು. ಜನಪ್ರಿಯ ಆಸ್ಪತ್ರೆಯ ವೈದ್ಯರ ತಂಡ ವಿಶೇಷ ಮುತುವರ್ಜಿ ವಹಿಸಿ ಚಿಕಿತ್ಸೆ ನೀಡಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.
ಈ ಸಂದರ್ಭ ಉಸ್ತಾದ್ ಅವರು ಜನಪ್ರಿಯ ಆಸ್ಪತ್ರೆಯ ಚೇಯರ್ ಮ್ಯಾನ್ ಡಾ. ಅಬ್ದುಲ್ ಬಶೀರ್ ಮತ್ತು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ದುವಾಃ ಮಾಡಿ ತೆರಳಿದರು.




