ಬಂಟ್ವಾಳ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಚೂರಿ ಇರಿತ: ಪ್ರಕರಣ ದಾಖಲು
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಘಟನೆ ಸೋಮವಾರ ವರದಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಕಣಚ್ಚೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಏಕಮುಖ ಪ್ರೀತಿಯೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿದ್ದರೂ, ಅದರ ಬಗ್ಗೆ ಪೊಲೀಸ್ ಇಲಾಖೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಘಟನೆಯ ನಿಖರ ಕಾರಣವು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದೆ.
ಘಟನೆಯ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿನಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




