ಪುಣಚ: ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ: ಹಲವರಿಗೆ ಗಾಯ
ಪುಣಚ: ಪುಣಚ ಗ್ರಾಮದ ಮಲ್ಲಿಕಟ್ಟೆ ಎಂಬಲ್ಲಿ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಪ್ರಯಾಣಿಕರು ಹಾಗೂ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಜು.6ರಂದು ಮಧ್ಯಾಹ್ನ ನಡೆದಿದೆ.
ಘಟನೆಯ ವಿವರ:
ಪುತ್ತೂರು ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಎದುರಿನಿಂದ ಬಂದ ದ್ವಿಚಕ್ರ ವಾಹನವು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಹಾಗೂ ದ್ವಿಚಕ್ರ ವಾಹನ ಸವಾರ ಇಬ್ಬರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.




