ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಮಹಿಳೆ ಮೃತ್ಯು
ಚಿಕ್ಕಮಗಳೂರು: ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ಜು.7ರ ಮಂಗಳವಾರ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಶೀಲಾ (52) ಎಂದು ಗುರುತಿಸಲಾಗಿದೆ. ಅವರು ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ನಡೆಸಿದೆ. ಶೀಲಾ ಅವರನ್ನು ತೋಟದಿಂದ ಆಸ್ಪತ್ರೆಗೆ ತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಕೋಣ ಬಲವಾಗಿ ತಿವಿದಿರುವುದರಿಂದ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆ ಶೀಲಾ ಮೃತಪಟ್ಟರು ಎನ್ನಲಾಗಿದೆ.
ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ನಡೆದಿವೆ.




