ಜುಲೈ 8ರಂದು ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪರಿಗಣಿಸಿ ನಾಳೆ (ಜುಲೈ 08) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ದ್ವಿತೀಯ ಪಿಯುಸಿ ವರೆಗಿನ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೋಷಕರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಮಕ್ಕಳು ಹೊರಗೆ ಸಂಚರಿಸದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.




