July 7, 2026

ವಿಟ್ಲ: ನಿಲ್ಲಿಸಿದ್ದ ಲಾರಿಗಳಿಂದ ಬ್ಯಾಟರಿ ಕಳವು ಪ್ರಕರಣ: 10 ಲಾರಿಗಳ ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ ವಿಟ್ಲ ಪೊಲೀಸರು

0
image_editor_output_image-1059008871-1783442457873

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಪ್ರಕರಣಗಳನ್ನು ವಿಟ್ಲ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಠಾಣೆಯಲ್ಲಿ ಅಪರಾಧ ಸಂಖ್ಯೆ 38/2025, 39/2026, 41/2026, 123/2026 ಹಾಗೂ 126/2026 ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು, ಕಾಸರಗೋಡು ಚರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50) ಹಾಗೂ ಕಾಸರಗೋಡು ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಅವರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ 10 ಲಾರಿ ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!