July 8, 2026

ವಿಟ್ಲ: ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ಮೂಲದ ಆರೋಪಿಯ ಬಂಧನ

0
image_editor_output_image462968684-1783487574486

ವಿಟ್ಲ: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಜು. 6ರಂದು ದಸ್ತಗಿರಿ ಮಾಡಿದ್ದಾರೆ.

ಬೆಳ್ತಂಗಡಿ ನಿವಾಸಿ ರಾಜೇಶ್ (41) ದಸ್ತಗಿರಿ ಮಾಡಲಾದ ಆರೋಪಿ.

ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 204/2018  Se. 379 IPC ಐಪಿಸಿ ಪ್ರಕರಣದ ಆರೋಪಿಯಾಗಿರುವ ಈತನು ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ೦೩ ವರ್ಷದಿಂದ ತಲೆಮರೆಸಿಕೊಂಡಿದ್ದ.

ಆರೋಪಿಯನ್ನು ವಿಟ್ಲ ಠಾಣಾ ಸಿಬ್ಬಂದಿಗಳಾದ ASI ಜಯರಾಮ, CPC ವೆಂಕಪ್ಪ ಹಾಗೂ CPC ಶಿವಾನಂದ ಅವರು ಜು.6 ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Leave a Reply

Your email address will not be published. Required fields are marked *

error: Content is protected !!