July 9, 2026

ದ.ಕ ಜಿಲ್ಲೆಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ: ತಮಿಳುನಾಡು ಮೂಲದ ಆರೋಪಿಯನ್ನು ಬಂಧಿಸಿದ ಪೊಲೀಸರು

0
IMG-20260709-WA0174

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಕುಖ್ಯಾತ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಮಿಳುನಾಡಿನ ಕೊಯಂಬತ್ತೂರು ನಿವಾಸಿ ಜಯಕುಮಾರ್ ವಿ. (55) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಐದು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.ಜುಲೈ 8ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನಿಂದ ಕಬ್ಬಿಣದ ಸಲಾಕೆ, ಸ್ಕ್ರೂ ಡ್ರೈವರ್, ಒಂದು ಬ್ಯಾಗ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!