ಪುತ್ತೂರು: ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಯುವಕ ಮೃತ್ಯು
ಪುತ್ತೂರು: ಸವಣೂರು ತಾಲೂಕಿನ ಕೊಳ್ತಿಗೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ಮುರಳೀಧರ ಎಸ್.ಪಿ. ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಮ್ಚಿನಡ್ಕ ನಿವಾಸಿ ಅವಿನಾಶ್ (24) ಎಂಬವರೇ ಮೃತ ದುರ್ದೈವಿ.
ಪುತ್ತೂರು ಅಗ್ನಿಶಾಮಕ ದಳದ ಸಿಬಂದಿ ಮೃತ ದೇಹವನ್ನು ಕೆರೆಯಿಂದ ಮೇಲೆಕ್ಕೆತ್ತಿದ್ದು, ಬೆಳ್ಳಾರೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.