ವಿಟ್ಲ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಬಂಟ್ವಾಳ: ಕನ್ಯಾನ ಸಮೀಪದ ಕೊಣಲೆ ಮಳವೆಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಬಳಿವಷ್ಟೇ ಹೊರಬೀಳಲಿದೆ.




