July 11, 2026

ವಿಟ್ಲ: ಆಟೋ ರಿಕ್ಷಾ ಮತ್ತು ಸ್ಕೂಟರ್ ನಡುವೆ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಸವಾರ ನಾಸೀರ್ ದಂಡೆಮಾರ್ ಮೃತ್ಯು

0
image_editor_output_image-1640197678-1783752461075

ವಿಟ್ಲ: ಜುಲೈ 4 ರಂದು ಕೆಲಿಂಜ ಎಂಬಲ್ಲಿ  ಆಟೋ ರಿಕ್ಷಾ -ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಜುಲೈ 11) ಕೊನೆಯುಸಿರೆಳೆದಿದ್ದಾರೆ.

ಅಪಘಾತದ ವಿವರ: ಕಳೆದ ವಾರ (ಜುಲೈ 4 ರಂದು) ನಾಸಿರ್ ಅವರು ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್ ಸವಾರ ನಾಸಿರ್ ಅವರ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ (ICU) ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!