July 11, 2026

ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ನಿಧನ

0
IMG-20260711-WA0126

ಮೈಸೂರು: ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (88) ಶನಿವಾರ (ಜು.11) ನಿಧನ ಹೊಂದಿದರು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿರು. 20ಕ್ಕೂ ಹೆಚ್ಚಿನ ಭಾಷೆಗಳಲ್ಲಿ ಹಾಡಿದ್ದ ಅವರು ಇತ್ತೀಚಿನ ದಿನಗಳಲ್ಲಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಗಾಯಕಿ, ಗೀತಸಾಹಿತಿ ಮತ್ತು ಸಂಗೀತ ನಿರ್ದೇಶಕಿ. ಕನ್ನಡ,ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದರು.

1938 ರಲ್ಲಿ ಆಂಧ್ರಪ್ರದೇಶದ ಗುಂಟೂರಿನ ಹಳ್ಳಿಯಲ್ಲಿ ಜನಿಸಿದರು. ಬಾಲ್ಯದಿಂದಲೂ ಸಂಗೀತದಲ್ಲಿ ಆಸಕ್ತಿಯಿದ್ದ ಜಾನಕಿಯವರು ನಾದಸ್ವರ ವಿದ್ವಾನ್ ಶ್ರೀ ಪೈಡಿಸ್ವಾಮಿಯವರ ಹತ್ತಿರ ಸಂಗೀತ ಕಲಿತರು.

Leave a Reply

Your email address will not be published. Required fields are marked *

error: Content is protected !!