July 11, 2026

ಸುಳ್ಯ: ಅಪ್ರಾಪ್ತ ಶಾಲಾ ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ: ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

0
931364-929627-hathras-rape-case

ಸುಳ್ಯ: ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಬಾಲಕಿ ಶಾಲೆಗೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದಾಗ, ಆಕೆಯ ನೆರೆಮನೆಯ ನಿವಾಸಿ ಹಾಗೂ ಪರಿಚಯಸ್ಥನಾದ ಮಂಜುನಾಥ ಎಂಬಾತನು 2026ರ ಜೂನ್ 22ರಿಂದ ಜುಲೈ 9ರವರೆಗೆ ತನ್ನ ಮನೆಗೆ ಕರೆದುಕೊಂಡು ಹೋಗಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 94/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m), 65(1) ಹಾಗೂ ಪೊಕ್ಸೊ ಕಾಯ್ದೆಯ ಕಲಂ 4, 5(l) ಮತ್ತು 6ರಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಕುರಿತು ಸುಳ್ಯ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!