ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಸಂಚರಿಸಿ ವ್ಯವಸ್ಥೆ ಪರೀಕ್ಷಿಸಿದ ಸಚಿವ ಬೈರತಿ ಸುರೇಶ್:
ಪ್ರಯಾಣಿಕ ಕೈ ತೋರಿಸಿ ನಿಲ್ಲಿಸದೆ ಚಲಾಯಿಸಿದ ಚಾಲಕ ಮತ್ತು ನಿರ್ವಾಹಕ ಅಮಾನತು
ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಬಿಎಂಟಿಸಿ ಬಸ್‌ಗಳಲ್ಲಿ ದಿಢೀರ್ ಪ್ರಯಾಣ ನಡೆಸಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ರಿಯಾಲಿಟಿ ಚೆಕ್ ನಡೆಸಿದರು.
ಮಾಸ್ಕ್ ಧರಿಸಿ ಪ್ರಯಾಣ ಮಾಡಿದ್ದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರಿಗಾಗಲಿ, ಚಾಲಕ ಹಾಗೂ ಕಂಡಕ್ಟರ್‌ಗಾಗಲಿ ಇವರು ಸಚಿವರು ಎಂಬುದು ಗಮನಕ್ಕೆ ಬಂದಿರಲಿಲ್ಲ. ಪ್ರತಿಯೊಂದು ಬಸ್‌ಗೂ ನಿಗದಿತ ಹಣ ನೀಡಿ ಪ್ರಯಾಣಿಸಿದ ಸಚಿವರು, ಕೆಲವು ಪ್ರಯಾಣಿಕರೊಂದಿಗೆ ಬಸ್ ಸಂಚಾರದ ಕುರಿತು ಮಾಹಿತಿ ಪಡೆದು ಸಮಸ್ಯೆಗಳ ಬಗ್ಗೆ ವಿಚಾರಿಸಿದರು.
ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕೈ ತೋರಿಸಿದರೂ ನಿಲ್ಲಿಸದೆ ಮುಂದುವರಿದಿತ್ತು. ಈ ವೇಳೆ ಹಿಂದಿನ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಚಿವ ಬೈರತಿ ಸುರೇಶ್ ಅವರು, ಸದರಿ ಬಸ್‌ನ ಕಂಡಕ್ಟರ್ ದಯಾನಂದ್ ಹಾಗೂ ಚಾಲಕ ಮುಸ್ತಾಕ್ ಅವರನ್ನು ಅಮಾನತು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.




