ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಪಾದಚಾರಿಗೆ ಗಂಭೀರ ಗಾಯ
ಬಂಟ್ವಾಳ : ಕಾವಳಪಡೂರು ಗ್ರಾಮದ ಮದ್ವ ಕೈಲಾರ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ(ಜು. 11) ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿನ್ನೆ(ಜು. 11) ಬೆಳಿಗ್ಗೆ ಧರ್ಮಸ್ಥಳ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೆದ್ದಾರಿಯನ್ನು ದಾಟುತ್ತಿದ್ದ ಮುನಿಝಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುನಿಝಾ ರಸ್ತೆಗೆ ಬಿದ್ದು ಗಂ*ಭೀರ ಗಾಯಗಳಾಗಿವೆ.
ಗಾಯಾಳುವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.




