July 13, 2026

ಗಾಂಜಾ ಮಾರಾಟಕ್ಕೆ ಯತ್ನ: ಏಳು ಕೆ.ಜಿ ಗಾಂಜಾ ಸಹಿತ ಮಹಿಳೆಯ ಬಂಧನ

0
image_editor_output_image-1442508477-1783924688127

ಹಾಸನ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಏಳು ಕೆಜಿ ಗಾಂಜಾ ಸಹಿತ ಮಹಿಳೆಯೊಬ್ಬಳನ್ನು ಬಂಧಿಸಿದ ಘಟನೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮೇಲೂರು ಗ್ರಾಮದ ಶೀಲಾ ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ಜಬೀ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕಬ್ಬೂರು ಗ್ರಾಮದ ಸಮೀಪ ಮರೆಮಂಟಿ ಕಾಡು ಬಳಿ ಎರಡು ದ್ವಿಚಕ್ರ ವಾಹನಗಳಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಅನುಸರಿಸಿ ಹಳ್ಳಿ ಮೈಸೂರು ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜಬಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಶೀಲಾಳನ್ನು ವಶಕ್ಕೆ ಪಡೆದ ಪೊಲೀಸರು ಆಕೆಯ ಬಳಿಯಿದ್ದ ಸುಮಾರು 7 ಕೆಜಿ ಗಾಂಜಾ, ಒಂದು ದ್ವಿಚಕ್ರ ವಾಹನ ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!