ಫರಂಗಿಪೇಟೆ: ಕೆನರಾ ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನ
ಬಂಟ್ವಾಳ: ಇಲ್ಲಿನ ಗ್ರಾಮಾತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ಮಿನೆಜಸ್ ಪ್ಲಾಜಾ ಕಾಂಪ್ಲೆಕ್ಷ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನರಾ ಬ್ಯಾಂಕಿನ ಶಾಖೆಯಲ್ಲಿ ಭಾನುವಾರ ತಡರಾತ್ರಿ ಕಳ್ಳರು ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.
ಸೋಮವಾರ ಬೆಳಿಗ್ಗೆ ಬ್ಯಾಂಕಿನ ಸಿಬ್ಬಂದಿಗಳು ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ.
ಬ್ಯಾಂಕಿನ ಮೇಲ್ಛಾವಣಿ ತುಂಡರಿಸಿ ಕಳ್ಳರು ಬ್ಯಾಂಕ್ ಒಳಗೆ ಪ್ರವೇಶಿಸಿ, ಒಳಗೆ ಚಿನ್ನಾಭರಣಕ್ಕೆ ಹುಡುಕಾಟ ನಡೆರುವುದು ಕಂಡು ಬಂದಿದೆ.
ಪ್ರಸ್ತುತ ಸ್ಥಳಕ್ಕೆ ಬಂಟ್ವಾಳ ಗ್ರಾಮಾತರ ಪೊಲೀಸ್ ಠಾಣಾ ಪೊಲೀಸರು, ಬೆರಳಚ್ಚು ತಂಡ, ಸೋಕೋ ತಂಡ ಗಳು ಭೇಟಿ ನೀಡಿದ್ದು, ಯಾವುದೇ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇ ಬಗ್ಗೆ ಸಮಗ್ರ ಪರಿಶೀಲನೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




