ಮಂಗಳೂರು: ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿಯ ಬಂಧನ
ಮಂಗಳೂರು: ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ, ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮೇಲಂಗಡಿ ನಿವಾಸಿ
ಇಮ್ರಾನ್ @ ಸುರ್ಮೋ ಇಮ್ರಾನ್ ಬಂಧಿತ ಆರೋಪಿ.
ಈತ ಮಾನ್ಯ ನ್ಯಾಯಾಲಯದಿಂದ ವಾರಂಟ್‌ಗಳಿದ್ದರೂ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಹಾಕಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದ ಇಮ್ರಾನ್ @ ಸುರ್ಮೋ ಇಮ್ರಾನ್ ಎಂಬಾತನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈತನ ವಿರುದ್ಧ ಮಂಗಳೂರು ನಗರದ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ಇರುತ್ತದೆ. ಈತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. .




