July 14, 2026

ಕಲಬುರಗಿ: ಮೂವರು ಕೈದಿಗಳು ಸೆಂಟ್ರಲ್ ಜೈಲಿನಿಂದ ಪರಾರಿ

0
60g4r8mgan5hghjail

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು ಇಂದು(ಮಂಗಳವಾರ) ನಸುಕಿನ ಜಾವ ಪರಾರಿಯಾಗಿರುವ ಘಟನೆ ನಡೆದಿದೆ.

ಪರಾರಿಯಾದ ಕೈದಿಗಳನ್ನು ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಇಸ್ಲಾಂಪುರದ ಮಸ್ತಾನ್, ಔರಾದ್ ತಾಲ್ಲೂಕಿನ ಸಂತಾಪುರ ಗ್ರಾಮದ ಸಂತೋಷ ಬಸಪ್ಪ ಹಾಗೂ ಬೀದರ್‌ ತಾಲೂಕಿನ ಬಕ್ಕಚೌಡಿ ಗ್ರಾಮದ ಸಾಗರ ಭೀಮರಾಯ ಎಂದು ಗುರುತಿಸಲಾಗಿದೆ.

ಕೈದಿಗಳು ಜೈಲಿನ ಭದ್ರತಾ ಗೋಡೆ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲು ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾದ ಕೈದಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಹಾಗೂ ಗಡಿ ಭಾಗಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಕೈದಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!