ವಿಟ್ಲ: ಪೇಟೆಯಲ್ಲಿ ಸಂಭವಿಸುತ್ತಿರುವ ಟ್ರಾಫಿಕ್ ಸಮಸ್ಯೆ: ಜುಲೈ 18ರಂದು ರಸ್ತೆ ಬದಿಯ ಕಟ್ಟಡ ಮಾಲಕರ ಸಭೆ ಕರೆದ ಶಾಸಕ ಅಶೋಕ್ ರೈ
ವಿಟ್ಲ: ವಿಟ್ಲ ಪೇಟೆಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಅಧ್ಯಕ್ಷತೆಯಲ್ಲಿ ವಿಟ್ಲ ಮುಖ್ಯ ಪೇಟೆಯ ಕಟ್ಟಡ ಮಾಲಕರ ಸಭೆ ಜುಲೈ 18ರಂದು ಆಯೋಜಿಸಲಾಗಿದೆ.
ವಿಟ್ಲದಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆಯಿಂದ ಜನರು ಯಾತನೇ ಅನುಭವಿಸುತ್ತಿದ್ದಾರೆ. ಈ ಹಿಂದೆ ಕಾರ್ಯಕ್ರಮಯೊಂದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಜಾಗ ಬಿಟ್ಟು ಕೊಡಿ ನಾನು ರಸ್ತೆ ಅಭಿವೃದ್ಧಿ ಮಾಡುತ್ತೇನೆ ಎಂದು ತಿಳಿಸಿದ್ದರು.
ವಿಟ್ಲ ಪಟ್ಟಣದ ಪ್ರಮುಖ ನಾಲ್ಕು ರಸ್ತೆಗಳಾದ ಪುತ್ತೂರು ರಸ್ತೆ, ಉಕ್ಕುಡ ರಸ್ತೆ, ಸಾಲೆತ್ತೂರು ರಸ್ತೆ ಹಾಗೂ ಕಲ್ಲಡ್ಕ ರಸ್ತೆಗಳು ಪಟ್ಟಣದ ಹೃದಯಭಾಗದಲ್ಲಿ ಹಾದು ಹೋಗುತ್ತಿದ್ದು, ರಸ್ತೆ ಅಗಲ ಇಲ್ಲದಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ರಸ್ತೆಗಳ ಬದಿಯಲ್ಲಿರುವ ಕಟ್ಟಡಗಳ ಮಾಲೀಕರ ಸಭೆಯನ್ನು ನಡೆಸಲು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸೂಚಿಸಿದ್ದಾರೆ.
ಅದರಂತೆ ಜುಲೈ 18ರಂದು ಸಂಜೆ 4 ಗಂಟೆಗೆ ವಿಟ್ಲ ಪಟ್ಟಣದ ವಿಠಲ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಬಂಧಿತ ರಸ್ತೆಗಳ ಬದಿಯಲ್ಲಿರುವ ಕಟ್ಟಡಗಳ ಮಾಲೀಕರು ಕಡ್ಡಾಯವಾಗಿ ಭಾಗವಹಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅವರು ಪ್ರಕಟಣೆ ಮೂಲಕ ತಿಳಿಸಲಾಗಿದೆ.




