July 16, 2026

ಧರ್ಮಸ್ಥಳ ದರೋಡೆ ಪ್ರಕರಣ: ಆರೋಪಿಗಳ ಖುಲಾಸೆ

0
IMG-20260716-WA0046

ಬೆಳ್ತಂಗಡಿ: ತಾಲೂಕಿನ ಕಲ್ಮಿಂಜ ಗ್ರಾಮದ ನಿಡಿಗಲ್‌ ನಲ್ಲಿರುವ ಕೃಷಿ ಹಾಗೂ ಧರ್ಮಸ್ಥಳ ದೇವಸ್ಥಾನದ ರೆವೆನ್ಯೂ ವಿಭಾಗದ ಮುಖ್ಯಸ್ಥರ ಮನೆಯಲ್ಲಿ ದರೋಡೆ ಮಾಡಲು ಬಂದಿದ್ದರೆಂಬ ಪ್ರಕರಣದಲ್ಲಿನ ಆರೋಪಿಗಳನ್ನು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಪ್ರಕರಣದಲ್ಲಿನ ಆರೋಪಿಗಳಾಗಿದ್ದ ಪಿ. ಇರ್ಫಾನ್, ಚಿದಾನಂದ ಗೌಡ ಡಿ., ಮೊಹಮ್ಮದ್ ತೌಸೀಫ್, ಮೋಹನ, ನಿತಿನ್ ಕೋಟ್ಯಾನ್, ಮೊಹಮ್ಮದ್ ಆಶಿಕ್, ತೌಷಿರ್ ಎಂಬವರನ್ನು ನ್ಯಾಯಾಲಯ ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಾನ್ಯ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಾಟೆಯವರು ಪ್ರಾಸಿಕ್ಯೂಷನ್ ಪರ ಸುಮಾರು ೧೫ ಜನ ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದ್ದು, ಅದರಲ್ಲಿ ಪ್ರತ್ಯಕ್ಷ ಸಾಕ್ಷಿಗಳು ಪ್ರಕರಣಕ್ಕೆ ಪೂರಕ ಸಾಕ್ಷಿ ನುಡಿದಿದ್ದರು.

ಆರೋಪಿಗಳ ಪರವಾಗಿ ಖ್ಯಾರ ವಕೀಲರಾದ ವೇಣುಕುಮಾರ್ ಮತ್ತು ಯುವರಾಜ್ ಕೆ ಅಮೀನ್ ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!