July 16, 2026

ಬಿಸಿ ರೋಡ್: ಯುವತಿಯ ಹತ್ಯೆ ಪ್ರಕರಣ: ಏಕಪಕ್ಷೀಯ ಪ್ರೀತಿಸುತ್ತಿದ್ದ ಆರೋಪಿ ಚೇತನ್

0
InShot_20260716_202728230

ಬಂಟ್ವಾಳ: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬನು ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿ  ಪರಾರಿಯಾಗಿರುವ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಗೌಡ (21) ಎಂದು ಗುರುತಿಸಲಾಗಿದೆ.ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದ್ದು, ಈತನು ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಏಕಪಕ್ಷೀಯ ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿರುತ್ತದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!