September 21, 2026

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಪೊಲೀಸ್ ವಶಕ್ಕೆ

0
image_editor_output_image-165462225-1784262276976

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಮಚ್ಚಿನಿಂದ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

 

ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಹಾಗೂ ಪೊಲೀಸರು ಯಾವ ಸ್ಥಳದಲ್ಲಿ ಆರೋಪಿಯನ್ನು ವಶಕ್ಕೆ ಪಡೆದರು ಎಂಬ ಸಂಪೂರ್ಣ ವಿವರವನ್ನು ಇನ್ನಷ್ಟೇ ಪ್ರಕಟಿಸುವ ನಿರೀಕ್ಷೆಯಿದೆ. ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ಪ್ರಕಟಿಸಲಾಗುವುದು.

Leave a Reply

Your email address will not be published. Required fields are marked *

You may have missed

error: Content is protected !!