September 21, 2026

ಬಿ.ಸಿ ರೋಡ್: ಯುವತಿ ಹತ್ಯೆ ಪ್ರಕರಣ: ಇಲಿ ಪಾಷಾಣ ಸೇವಿಸಿದ ಆರೋಪಿ ಆಸ್ಪತ್ರೆಗೆ ದಾಖಲು

0
image_editor_output_image-940646145-1784267220196

ಬಂಟ್ವಾಳ: ಬಿಸಿರೋಡಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

 

ಪತ್ತೆಯಾದ ಆರೋಪಿಯು ಇಲಿ ಪಾಷಾಣ ಸೇವಿಸಿರುವ ಮಾಹಿತಿ ಲಭಿಸಿರುವ ಹಿನ್ನೆಲೆಯಲ್ಲಿ, ಆತನನ್ನು ವೈದ್ಯಕೀಯ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಹೆಚ್ಚಿನ ವಿವರಗಳನ್ನು ಬಳಿಕ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!