ವಿಟ್ಲ: ಚಾಲಕನ ನಿಯಂತ್ರಣ ಕಳೆದು ಮರಕ್ಕೆ ಡಿಕ್ಕಿ ಹೊಡೆದ ಲಾರಿ: ಇಬ್ಬರು ಗಂಭೀರ
ವಿಟ್ಲ: ಚಾಲಕನ ನಿಯಂತ್ರಣ ಟಿಪ್ಪರ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಉಕ್ಕುಡದ ದರ್ಬೆ ಬಳಿ ನಡೆದಿದೆ.
ಘಟನೆ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




