July 20, 2026

ಬೆಳ್ತಂಗಡಿ: ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತ: ಓರ್ವ ಮೃತ್ಯು, ಮತ್ತೋರ್ವ ಗಂಭೀರ

0
IMG-20260719-WA0091

ಬೆಳ್ತಂಗಡಿ: ಮದ್ದಡ್ಕ ಸಮೀಪ ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು ಹಿಂಬದಿ ಸವಾರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿ, ಬಳ್ಳಮಂಜ ನಿವಾಸಿ ಕೌಶಿಕ್ ಗೌಡ (19 ) ಮೃತಪಟ್ಟ ಯುವಕ. ಹಿಂಬದಿ ಸವಾರ ಮಡಂತ್ಯಾರಿನ ಭರತ್ (20) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಲಿಸುತ್ತಿದ್ದ ವೇಳೆ ಸಂಪರ್ಕ ರಸ್ತೆಯಿಂದ ಸ್ಕೂಟಿ ಏಕಾಏಕಿ ಅಡ್ಡ ಬಂದಿರುವುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!