July 20, 2026

ವಿಟ್ಲ: ಹೊಳೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹ; ವಿಟ್ಲ ಪೊಲೀಸರಿಂದ ದಾಳಿ-ಇಬ್ಬರು ವಶಕ್ಕೆ

0
IMG-20260719-WA0057

ವಿಟ್ಲ: ಹೊಳೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮರಳು ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟು ನೆಕ್ಕರೆ ಎಂಬಲ್ಲಿ ನಡೆದಿದೆ.

ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಮಹಮ್ಮದ್ ಮತ್ತು ಒಕ್ಕೆತ್ತೂರು ನಿವಾಸಿ ಶರೀಫ್ ಎಂಬವರು ಕಂಬಳಬೆಟ್ಟು ನೆಕ್ಕರೆ ಎಂಬಲ್ಲಿರುವ ಹೊಳೆಯಿಂದ ಮರಳುಗಳನ್ನು ಗೋಣಿ ಚೀಲದಲ್ಲಿ ತುಂಬಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಟ್ಲ ಎಸೈ ಮತ್ತು ಸಿಬ್ಬಂದಿಗಳು 60 ಚೀಲ ಮರಳು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!