July 21, 2026

ದಾಂಡೇಲಿ: ಜಿಪ್‌ಲೈನ್ ಸವಾರಿ ವೇಳೆ ಸೇಫ್ಟಿ ಲಾಕ್ ವೈಫಲ್ಯಗೊಂಡು 40 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯ

0
image_editor_output_image-1235448515-1784529456813

ದಾಂಡೇಲಿ: ಜಿಪ್‌ಲೈನ್ ಸವಾರಿ ವೇಳೆ ಸೇಫ್ಟಿ ಲಾಕ್ ವೈಫಲ್ಯಗೊಂಡ ಪರಿಣಾಮ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಪ್ರವಾಸಿಗ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ರೆಸಾರ್ಟೊಂದರಲ್ಲಿ ನಡೆದಿದೆ. ಗಾಯಾಳುವನ್ನು ವಿಜಯಪುರದ ಕುಬೇರ ಸುರಪುರ ಎಂದು ಗುರುತಿಸಲಾಗಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಹಸ ಪ್ರವಾಸೋದ್ಯಮ ಕೇಂದ್ರಗಳ ಸುರಕ್ಷತಾ ಮಾನದಂಡಗಳ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿದೆ.

ಕುಬೇರ ಅವರ ಕುಟುಂಬದವರ ಪ್ರಕಾರ, ಗಾಳಿಯಲ್ಲಿ ತೂಗುತಿದ್ದ ವೇಳೆ ಜಿಪ್‌ಲೈನ್‌ನ ಸುರಕ್ಷತಾ ಲಾಕ್ ಕೈಕೊಟ್ಟ ಪರಿಣಾಮ ಅವರು ನೆಲಕ್ಕೆ ಬಿದ್ದಿದ್ದಾರೆ. ಈ ದುರಂತದಲ್ಲಿ ಅವರ ಕೈ ಮತ್ತು ಕಾಲುಗಳಿಗೆ ಹಲವು ಕಡೆ ಮುರಿತಗಳಾಗಿದ್ದು, ನರಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಕುಬೇರ ಅವರನ್ನು ಮೊದಲು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ವಿಜಯಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ನಂತರ ಅವರನ್ನು ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರೆಸಾರ್ಟ್​​ ವಿರುದ್ಧ ಕುಟುಂಬಸ್ಥರ ಆರೋಪ
ರೆಸಾರ್ಟ್ ನಿರ್ವಹಣೆಯ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಜಿಪ್‌ಲೈನ್ ಉಪಕರಣಗಳು ತುಕ್ಕು ಹಿಡಿದಿದ್ದವು ಹಾಗೂ ಸಮರ್ಪಕ ನಿರ್ವಹಣೆ ಮಾಡಲಾಗಿರಲಿಲ್ಲ ಎಂದು ದೂರಿದ್ದಾರೆ. ಸೂಕ್ತ ನಿರ್ವಹಣೆ ಮತ್ತು ಸುರಕ್ಷತಾ ತಪಾಸಣೆ ನಡೆದಿದ್ದರೆ ಈ ಘಟನೆ ತಪ್ಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಹಸ ಕ್ರೀಡೆಗಳ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಪರಿಶೀಲನೆ, ನಿಯಮಿತ ಉಪಕರಣಗಳ ನಿರ್ವಹಣೆ ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!