July 20, 2026

ಸೌದಿ ಅರೇಬಿಯಾ: ನೀಟ್ (NEET UG)  ಪರೀಕ್ಷೆಯಲ್ಲಿ  ಅಗ್ರಸ್ಥಾನ ಪಡೆದ ವಿಟ್ಲ ಮೂಲದ ವಿದ್ಯಾರ್ಥಿ

0
image_editor_output_image687019119-1784537572338

ಸೌದಿ ಅರೇಬಿಯಾ:2026ರ ನೀಟ್ (NEET UG)  ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಮೊಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡ್ ವಿದೇಶಿ ವಿಭಾಗದಲ್ಲಿ ಅಗ್ರಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ಸೌದಿ ಅರೇಬಿಯಾದ ಅಲ್-ಜುಬೈಲ್‌ನ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಯಾನ್, ನೀಟ್ ಪರೀಕ್ಷೆಯಲ್ಲಿ 99.92 ಪರ್ಸೆಂಟೈಲ್ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗಿ ಪರಿಣಮಿಸಿದೆ. ಅಯಾನ್ ನೀಟ್ ಪರೀಕ್ಷೆಯಲ್ಲಷ್ಟೇ ಅಲ್ಲದೆ, ಇತ್ತೀಚೆಗೆ ನಡೆದ ಸಿಬಿಎಸ್‌ಇ 12ನೇ ತರಗತಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲೂ ಅಗ್ರ ಸಾಧನೆ ಮಾಡಿ ಈಗಾಗಲೇ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದರು.

ಅವರ ನಿರಂತರ ಪರಿಶ್ರಮ, ಶಿಸ್ತು ಮತ್ತು ಶೈಕ್ಷಣಿಕ ಸಾಧನೆಗೆ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್, ಅಲ್-ಜುಬೈಲ್ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಈ ಪ್ರತಿಭಾವಂತ ವಿದ್ಯಾರ್ಥಿಯ ಸಾಧನೆ ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ.

Leave a Reply

Your email address will not be published. Required fields are marked *

error: Content is protected !!