July 21, 2026

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಬಾಲಕಿಯ ಸಂಬಂಧಿಕನ ಬಂಧನ

0
image_editor_output_image-805563542-1784568437044

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಠಾಣಾ ಪೊಲೀಸರು ಬಾಲಕಿಯ ಸಂಬಂಧಿಕನನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ.

ವೇಣೂರು ಮೂಲದ ಬಾಲಕಿಯ ಸಂಬಂಧಿಕನಾಗಿದ್ದು ಖಾಸಗಿ ಬಸ್ಸಿನಲ್ಲಿ ಉದ್ಯೋಗ ಮಾಡುತ್ತಿದ್ದ ಶುಭರಾಜ್ ವಿರುದ್ಧ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ರವಿ ಬಿ.ಎಸ್. ಅವರ ನೇತೃತ್ವದ ತಂಡ ಆರೋಪಿ ಶುಭರಾಜ್ ನನ್ನು ಬಂಧಿಸಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬಳಿಕ ಮಂಗಳೂರಿನ ಜೈಲಿಗೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!