July 21, 2026

ಮಂತ್ರಾಲಯ ಸಮೀಪ ಭೀಕರ ರಸ್ತೆ ಅಪಘಾತ: ಮಂಗಳೂರು ಯಕ್ಷದ್ರುವ ಪಟ್ಲ ಫೌಂಡೇಶನ್ ಜತೆ ಕಾರ್ಯದರ್ಶಿ ಸ್ಥಳದಲ್ಲೇ ಮೃತ್ಯು

0
image_editor_output_image1996256194-1784630392913

ಮಂಗಳೂರು: ಕರ್ನೂಲು ಜಿಲ್ಲೆಯ ಮಂತ್ರಾಲಯದ ಸಮೀಪ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ), ಯಕ್ಷದ್ರುವ ಪಟ್ಲ ಫೌಂಡೇಷನ್ ನ ಜತೆ ಕಾರ್ಯದರ್ಶಿ ರವಿಶೆಟ್ಟಿ (43) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ:
ರವಿಶೆಟ್ಟಿ ಅವರು ತಮ್ಮ ಮೂವರು ಸ್ನೇಹಿತರೊಂದಿಗೆ ಮಂಗಳೂರಿನಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಕಾರಿನಲ್ಲಿ ತೆರಳುತ್ತಿದ್ದರು. ಮುಂಜಾನೆ ಮಂತ್ರಾಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯ ಕಲ್ವರ್ಟ್ (ಡಿವೈಡರ್‌) ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಜ್ಜುಗುಜ್ಜಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ರವಿಶೆಟ್ಟಿ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೂವರಿಗೆ ಗಂಭೀರ ಗಾಯ:
ಕಾರಿನಲ್ಲಿದ್ದ ಇತರ ಪ್ರಯಾಣಿಕರಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಅವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಧಾವಿಸಿ, ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆದಿದ್ದಾರೆ. ಸದ್ಯ ಗಾಯಗೊಂಡ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದೇ ಕಾರಣವೇ ಅಥವಾ ಬೇರೆನಾದರೂ ತಾಂತ್ರಿಕ ದೋಷವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!