July 23, 2026

ಮಂಗಳೂರು: ಮನೆಯಿಂದ ಚಿನ್ನಾಭರಣ ಕಳವು ಪ್ರಕರಣ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

0
image_editor_output_image1171143377-1784648321523

ಮಂಗಳೂರು: ಮನೆ ಕಾಮಗಾರಿಗೆ ಬಂದಿದ್ದ ಕಾರ್ಮಿಕನೊಬ್ಬ ಮನೆ ಮಾಲೀಕರ ಚಿನ್ನಾಭರಣ ಮತ್ತು ವಾಚ್ ಕಳವು ಮಾಡಿದ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರಿನ ಮೇರಿಹಿಲ್ ಬಾಂದೋಟ್ಟು ಪ್ರದೇಶದ ಮನೆಯೊಂದರಲ್ಲಿ ಛಾವಣಿ ಬದಲಾವಣೆ ಹಾಗೂ ಫಾಲ್ಸ್ ಸೀಲಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ, ಮನೆಯ ಟೇಬಲ್ ಡ್ರಾಯರ್‌ನಲ್ಲಿದ್ದ ಸುಮಾರು 49 ಗ್ರಾಂ ತೂಕದ ಚಿನ್ನಾಭರಣ ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ವಾಚ್ ಕಳವಾಗಿತ್ತು. ಕಳವಾದ ಚಿನ್ನಾಭರಣಗಳಲ್ಲಿ 20 ಗ್ರಾಂ ಚಿನ್ನದ ಕಡಗ, 17 ಗ್ರಾಂ ಚಿನ್ನದ ಚೈನ್, 8 ಗ್ರಾಂ ಮತ್ತು 4 ಗ್ರಾಂ ತೂಕದ ಎರಡು ಉಂಗುರಗಳು ಸೇರಿದ್ದು, ಒಟ್ಟು ಸೊತ್ತಿನ ಮೌಲ್ಯ ಸುಮಾರು ₹6.37 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 305ರಡಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಮನೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರನ್ನು ವಿಚಾರಣೆ ನಡೆಸಿದಾಗ, ಉತ್ತರ ಪ್ರದೇಶ ಮೂಲದ ಹಾಗೂ ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದಲ್ಲಿ ವಾಸವಿದ್ದ ಜಹೀರುದ್ದೀನ್ (24) ಎಂಬಾತ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ.

ಆರೋಪಿಯಿಂದ ಕಳವಾಗಿದ್ದ ಚಿನ್ನಾಭರಣ ಮತ್ತು ವಾಚ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಿ.ಆರ್. ಮಂಜಪ್ಪ, ಸಬ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿಯ ತಂಡ ಕ್ಷಿಪ್ರವಾಗಿ ತನಿಖೆ ನಡೆಸಿ 24 ಗಂಟೆಗಳೊಳಗೆ ಭೇದಿಸಿದೆ ಎಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!