July 22, 2026

ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ: ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಮೇಲೆ ಮೊಟ್ಟೆ ಎಸೆತ

0
IMG-20260722-WA0165

ಬೆಂಗಳೂರು: ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿರುವುದು ವರದಿಯಾಗಿದ್ದು, ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿದೆ.

ದಿಲ್ಲಿ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಬುಧವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಗಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು.

ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಭಾಗಿಯಾಗಿದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಮೊಟ್ಟೆ ಎಸೆದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!