July 22, 2026

ಮಾಣಿ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಮೃತಪಟ್ಟ ಹಿನ್ನೆಲೆ: ಪುತ್ತೂರು ಆಸ್ಪತ್ರೆಗೆ ಡಿ.ಸಿ, ಎಸ್ಪಿ ಭೇಟಿ

0
IMG-20260722-WA0187

ಪುತ್ತೂರು: ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಸಮೀಪ ಬೃಹತ್ ಗಾತ್ರದ ಮರ ಬಸ್ ಮೇಲೆ ಉರುಳಿ ಬಿದ್ದ ಪರಿಣಾಮ ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಬಿಳಿಯೂರು ನಿವಾಸಿ ಐದು ವರ್ಷದ ಚಿರಣ್ವಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಹಿನ್ನೆಲೆಯಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ (ಡಿಸಿ) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಭೇಟಿ ನೀಡಿದರು.

Leave a Reply

Your email address will not be published. Required fields are marked *

error: Content is protected !!