ವಿಟ್ಲ ಠಾಣಾ ವ್ಯಾಪ್ತಿಯ ಬ್ಯಾಟರಿ ಕಳವು ಪ್ರಕರಣ: ಕೇರಳದ ಮೂಲದ ಆರೋಪಿ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ 5 ಬ್ಯಾಟರಿ ಕಳವು ಪ್ರಕರಣ ಬೆಳಕಿಗೆ
ವಿಟ್ಲ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ವಾಹನಗಳ 05 ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 68/2026 ಕಲಂ: 303(2) BNS 2023 ರಂತೆ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಲಾಗಿ, ಪ್ರಕರಣದ ಆರೋಪಿತನಾದ ಕೇರಳ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು (ಈಗಾಗಲೇ ವಿಟ್ಲ ಪೊಲೀಸ್ ಠಾಣಾ ಆಕ್ರ: 38/2025, 39/2026, 41/2026, 123/2026 ಹಾಗೂ 126/2026 ರಂತೆ 05 ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುತ್ತಾನೆ) ದಿನಾಂಕ :20.07.2026 ರಂದು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿ, ಸದ್ರಿ ಆರೋಪಿಯು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಕಳವುಗೈದ 05 ಬ್ಯಾಟರಿಗಳನ್ನು ಸ್ವಾಧೀನಪಡಿಸಲಾಗಿರುತ್ತದೆ.




