ಫರಂಗಿಪೇಟೆ: ಕೆನರಾ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನ: ಆರೋಪಿಯ ಬಂಧನ
ಬಂಟ್ವಾಳ: ಪರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಮೇಲ್ಛಾವಣಿ ಕೊರೆದು ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂದು ಗುರುತಿಸಲಾಗಿದೆ.
ಜುಲೈ13, 2026ರಂದು ನಡೆದ ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 331(3), 331(4), 305(a) ಹಾಗೂ 62ರಡಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಆರೋಪಿಯನ್ನು ಜುಲೈ 22ರಂದು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ




