July 23, 2026

ವಿಟ್ಲ: ಕಳವು ಪ್ರಕರಣ: 8 ವರ್ಷಗಳ ಬಳಿಕ ಆರೋಪಿ ಬಂಧನ

0
IMG-20260723-WA0055

ವಿಟ್ಲ: ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಸುಮಾರು 8 ವರ್ಷಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 45/2017, ಭಾರತೀಯ ದಂಡ ಸಂಹಿತೆ (IPC) ಕಲಂ 379 ಹಾಗೂ 34ರಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಗಳೂರು ಕೊಲ್ಲೂರು ನಿವಾಸಿ ವಿಜಯ (32) ಎಂಬಾತ ಕಳೆದ ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ದಿನಾಂಕ 23-07-2026ರಂದು ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್ಟೇಬಲ್ ಶಿವಾನಂದ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಯಂಕಪ್ಪ ಅವರು ಮಂಗಳೂರಿನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದರು.

ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!