July 23, 2026

ಸುಳ್ಯ: ನಾಪತ್ತೆಯಾಗಿದ್ದ ಅಪ್ರಾಪ್ತೆ ಬಾಲಕಿಯನ್ನು ಪತ್ತೆ ಹಚ್ಚಿದ ಪೊಲೀಸರು: ಕಡಬದ ಯುವಕನ ಬಂಧನ

0
Is-an-Arrest-a-Conviction-Blog-Photo-min-scaled

ಸುಳ್ಯ: ಕೆಲಸಕ್ಕಾಗಿ ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟು ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಕಾಯ್ದೆಯಡಿ ಹೆಚ್ಚುವರಿ ಆರೋಪಗಳನ್ನು ಸೇರಿಸಿ ಯುವಕನನ್ನು ಬಂಧಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರಿ ಮೇ 7, 2026ರಂದು ಕೆಲಸಕ್ಕಾಗಿ ಮಂಗಳೂರಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದಳು. ಬಳಿಕ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಪೋಷಕರು ನೀಡಿದ ದೂರಿನ ಮೇರೆಗೆ ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 64/2026ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿದ ವೇಳೆ, ಜುಲೈ 22ರಂದು ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದರು. ಬಾಲಕಿ ನೀಡಿದ ಹೇಳಿಕೆಯಂತೆ, ಕಡಬ ನಿವಾಸಿ ಧನುಷ್ (18) ಎಂಬಾತ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಪೋಕ್ಸೋ ಕಾಯ್ದೆಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಅಳವಡಿಸಲಾಗಿದೆ.

ಆರೋಪಿ ಧನುಷ್‌ನನ್ನು ಜುಲೈ 22ರಂದು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!