ಸಿಜೆಪಿ) ಸ್ಥಾಪಕ ಅಭಿಜಿತ್ ದೀಪ್ಕೆ ಗೆ ಟೈಫಾಯಿಡ್: ಪ್ರತಿಭಟನೆ ಮುಂದುವರೆಯಲಿದೆ ಎಂದ ಸಿಜೆಪಿ ನಾಯಕ
Oplus_16908288
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸ್ಥಾಪಕ ಅಭಿಜಿತ್ ದೀಪ್ಕೆ ಟೈಫಾಯಿಡ್ ಗೆ ಒಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಸಾಮಾಜಿ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ‘ನನಗೆ ಟೈಫಾಯಿಡ್ ಇರುವುದು ದೃಢಪಟ್ಟಿದೆ, ಆದರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯುತ್ತದೆ’ ಎಂದು ಬರೆದುಕೊಂಡಿದ್ದಾರೆ.
ವಿಡಿಯೊದಲ್ಲಿ, ‘ನಿಮಗೆಲ್ಲರಿಗೂ ತಿಳಿದಿರುವಂತೆ, ಕಳೆದ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿಯಿರಲಿಲ್ಲ. ಈಗ ರಕ್ತ ಪರೀಕ್ಷೆಯ ವರದಿಗಳು ಬಂದಿದ್ದು, ನನಗೆ ಟೈಪಾಯ್ಡ್ ಇರುವುದು ದೃಢಪಟ್ಟಿದೆ. ಚಿಕಿತ್ಸೆ ನಡೆಯುತ್ತಿದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಐವಿ (IV) ಡ್ರಿಪ್‌ಗಳನ್ನು ನೀಡಲಾಗುತ್ತಿದೆ. ದೇಶದಾದ್ಯಂತ ಪ್ರತಿಭಟನೆಯನ್ನು ಅತ್ಯಂತ ಶಾಂತಿಯುತವಾಗಿ ನಡೆಸಿದ್ದಕ್ಕಾಗಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಬೆಂಬಲಿಗರಿಗೆ ಧನ್ಯವಾದ. ನಾವು ಶಾಂತಿಯುತವಾಗಿ ಪ್ರತಿಭಟನೆಯನ್ನು ಮುಂದುವರಿಸಿದರೆ, ಖಂಡಿತವಾಗಿಯೂ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾಗುತ್ತದೆ ಎಂಬ ದೃಢ ನಂಬಿಕೆ ನನಗಿದೆ’ ಎಂದು ಹೇಳಿದ್ದಾರೆ.





