ಬಂಟ್ವಾಳ: ಚಲಿಸುತ್ತಿದ್ದಾಗ ಕಳಚಿದ ಕಂಟೇನರ್ ಲಾರಿಯ ಚಕ್ರ – ಪಾದಚಾರಿಗೆ ಗಾಯ
ಬಂಟ್ವಾಳ: ಚಲಿಸುತ್ತಿದ್ದ ಕಂಟೇನರ್ ಲಾರಿಯ ಹಿಂಬದಿ ಚಕ್ರ ಕಳಚಿದ ಕಾರಣ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ಜಂಕ್ಷನ್ ಬಳಿ ನಡೆದಿದೆ.
ಹೊರರಾಜ್ಯ ನೋಂದಣಿ ಹೊಂದಿರುವ ಕಂಟೇನರ್ ಲಾರಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಹಿಂಬದಿಯ ಚಕ್ರ ಕಳಚಿ ಬಿದ್ದಿದೆ ಎಂದು ಆರೋಪಿಸಲಾಗಿದೆ.
ಚಕ್ರ ಬೇರ್ಪಟ್ಟು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೆಸಿಲ್ಲ ಎಂಬ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಅವರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




