July 26, 2026

ವಿಟ್ಲ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ-ಮತ್ತೊಂದು ಮನೆಯಿಂದ ಸ್ಕೂಟರ್ ಎಗರಿಸಿ ಪರಾರಿ

0
IMG-20260726-WA0031

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಕೊಡಂಗೆ ನಿವಾಸಿ ಸೂರ್ಯನಾರಾಯಣ ಭಟ್ ಅವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ದರೋಡೆಗೈದು ಪರಾರಿಯಾಗಿರುವ ಘಟನೆ ಶನಿವಾರ (ಜು.25) ತಡರಾತ್ರಿ ನಡೆದಿದೆ.

ಇದೇ ವೇಳೆ ಮತ್ತೊಂದು ಮನೆಯಲ್ಲಿದ್ದ ಸ್ಕೂಟರ್‌ನ್ನು ಕಳ್ಳರು ಕದ್ದೊಯ್ದಿದ್ದು, ಇನ್ನೊಂದು ಮನೆಯಲ್ಲಿದ್ದ ಬೈಕ್‌ನ ಲಾಕ್ ತೆರೆಯಲು ಪ್ರಯತ್ನಿಸಿದ್ದಾರೆ. ಆದರೆ ಬೈಕ್‌ನ ಲಾಕ್ ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಚಿನ್ನಾಭರಣ ಹಾಗೂ ಸ್ಕೂಟರ್‌ನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ಬಂಟ್ವಾಳ ಡಿವೈಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇಡ್ಕಿದು ಗ್ರಾಮದಲ್ಲಿ ಈ ಹಿಂದೆಯೂ ಹಲವು ಬಾರಿ ಕಳ್ಳತನ ಪ್ರಕರಣಗಳು ನಡೆದಿದ್ದು, ಇದೀಗ ಮತ್ತೆ ಕಳ್ಳತನ ಮರುಕಳಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸರಣಿ ಕಳ್ಳತನದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!