December 16, 2025

ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ: 12 ಮಂದಿ ಮೃತ್ಯು
ಪ್ರಧಾನಿ ಮೋದಿ ಸಂತಾಪ

0
vaishno-devi-stampede_1640997797512_1640997812950.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ 2:45 ರ ಸುಮಾರಿಗೆ ಕಾಲ್ತುಳಿತಕ್ಕೆ 12 ಮಂದಿ ಭಕ್ತರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಹೊಸ ವರ್ಷ ಹಿನ್ನೆಲೆಯಲ್ಲಿ ಮಾತಾ ವೈಷ್ಣೋ ದೇವಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಈ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ತ್ರಿಕೂಟ ಬೆಟ್ಟದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಗೂ ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!