ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಹೊರಗೆ: ಚುನಾವಣಾ ಆಯೋಗ
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ.
ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ತೆರಳಿ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸುವುದರ ಜೊತೆಗೆ ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.




