ಸರಳಿಕಟ್ಟೆ: ಫೊಕ್ಸೋ ಕಾಯಿದೆಯ ಕುರಿತು ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ
ಸರಳಿಕಟ್ಟೆ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಸ.ಉ.ಹಿ.ಪ್ರಾಥಮಿಕ ಶಾಲೆ, ಸರಳಿಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಸರಳಿಕಟ್ಟೆ ಸರಕಾರಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ರಾಮಲಿಂಗಪ್ಪ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು, ಹಾಗೂ ಸದಸ್ಯ ಕಾರ್ಯದರ್ಶಿಗಳು, ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಲೈಂಗಿಕ ದೌರ್ಜನ್ಯಗಳ ವಿರುದ್ಧ ರಕ್ಷಣೆ, ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ತಿಳಿಸಿಕೊಟ್ಟರು. ಯಾರಾದರೂ ಅನುಚಿತವಾಗಿ ವರ್ತಿಸಿದರೆ ತಕ್ಷಣ ಶಿಕ್ಷಕರಿಗೆ ಅಥವಾ ಪೋಷಕರಿಗೆ ತಿಳಿಸುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಅಲೋಶಿಯಸ್ ಎಸ್. ಲೋಬೋ ಅಧ್ಯಕ್ಷರು ವಕೀಲರ ಸಂಘ, (ರಿ) ಬೆಳ್ತಂಗಡಿ ರವರು ಮುಖ್ಯ ಅತಿಥಿಗಳಾಗಿ ಕಾರ್ಯಕಮದಲ್ಲಿ ಭಾಗವಹಿಸಿ ಮಾಧಕ ವ್ಯಸನ್ಯದಿಂದ ದೂರ ಇರುವಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಸಂದೇಶ ನೀಡಿದರು.
ಪ್ರಶಾಂತ್ ಎಂ ಪ್ರಧಾನ ಕಾರ್ಯದರ್ಶಿಗಳು, ವಕೀಲರ ಸಂಘ, (ರಿ) ಬೆಳ್ತಂಗಡಿ ಮುಖ್ಯ ಅತಿಥಿಗಳಾಗಿ ಕಾರ್ಯಕಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಸೇವೆಗಳ ಸಮಿತಿಯ ಉದ್ದೇಶ ಮತ್ತು ಸಾರ್ವಜನಿಕರಿಗೆ ಸಿಗುವ ಉಚಿತ ಕಾನೂನು ನೆರವಿನ ಬಗ್ಗೆ ಸರಳವಾಗಿ ತಿಳಿಸಿಕೊಟ್ಟರು.
ಶಿವಕುಮಾರ್ ಎಸ್. ಎಂ. ಹಿರಿಯ ವಕೀಲರು, ಬೆಳ್ತಂಗಡಿ ರವರು ಸದರಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾನವ ಕಳ್ಳ ಸಾಗಾಣಿಕೆ ಕುರಿತು ಹಾಗೂ ಪೋಕ್ಸೊ ಕಾಯಿದೆ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಆಗುವಂತೆ ಸವಿವರವಾಗಿ ತಿಳಿಸಿಕೊಟ್ಟರು.
ವಿದ್ಯಾರ್ಥಿಗಳಲ್ಲಿ ಶಿಸ್ತು, ಕಾನೂನಿನ ಅರಿವು ಮತ್ತು ಸುರಕ್ಷತೆಯ ಪ್ರಜ್ಞೆಯನ್ನು ಮೂಡಿಸಲು ಈ ಕಾರ್ಯಕ್ರಮವು ಬಹಳಷ್ಟು ಸಹಕಾರಿಯಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಅನುರಾಧ ಹೇಳಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷೆ ಅಡ್ವಕೇಟ್ ಜುಬೇದಾ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಕಾನೂನು ಸೇವೆಗಳ ಸಮಿತಿಯ ತಂಡವನ್ನು ಆದರದಿಂದ ಸ್ವಾಗತಿಸಿ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು.






