September 16, 2026

ಮಂಗಳೂರು: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಆರೋಪಿಯ ಬಂಧನ

0
image_editor_output_image-1310903039-1785478809629

ಮಂಗಳೂರು: 2015ರಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಚುಂಕಿ ಆಕಾಶಭವನ @ ಸಂತೋಷ್ ಎಸ್ (34) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

2015ರಲ್ಲಿ ಆಕಾಶಭವನದಲ್ಲಿ ನಡೆದ ಮದುವೆಯ ಕಾರ್ಯಕ್ರಮದ ವೇಳೆ ಉಂಟಾದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ, ಆರೋಪಿ ಸಂತೋಷ್ ಹಾಗೂ ಇತರ ಆರೋಪಿಗಳು ಸೇರಿ ಅಶೋಕ ಕುಮಾರ ಕೊಟ್ಟಾರಿ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 135/2015ರಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾಗಿದ ಬಳಿಕ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ಧ ನ್ಯಾಯಾಲಯ LPC ವಾರಂಟ್ (25/2025) ಹೊರಡಿಸಿತ್ತು.

ಸಿಸಿಬಿ ಪೊಲೀಸರು ದೀರ್ಘಕಾಲದ ಮಾಹಿತಿ ಸಂಗ್ರಹದ ಬಳಿಕ ಆರೋಪಿಯು ಶಿವಮೊಗ್ಗ ಭಾಗದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದು, ಜುಲೈ 29, 2026ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರಿನಲ್ಲಿ ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!