September 16, 2026

ವಿಟ್ಲ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧ ಜೀವನ್ಮರಣ ಸ್ಥಿತಿಯಲ್ಲಿ ತೋಟದ ಚರಂಡಿಯಲ್ಲಿ ಪತ್ತೆ: ವೃದ್ಧನ ಪತ್ತೆಗಾಗಿ ಕಾರ್ಯಾಚರಣೆ ಇಳಿದ ಸಾಮಾಜಿಕ ಮುಖಂಡರು

0
image_editor_output_image2064269520-1785483996223

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಳೆದ ಮಂಗಳವಾರ ವೃದ್ಧ ಕಾಣೆಯಾಗಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಕೆರೆ, ಮತ್ತು ಹಳ್ಳಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಅವರ ಸಂಬಂಧಿಕರು ಮತ್ತು ಕೋಡಪದವು ಮಾರುತಿ ಫ್ರೆಂಡ್ಸ್ , ಸಾರ್ವಜನಿಕರ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಹುಟುಕಾಟ ಆರಂಭಿಸಿದ್ದರು.

ಕೋಡಪದವು ಮಾರುತಿ ಫ್ರೆಂಡ್ಸ್ ತಂಡದ ಮನೋಹರ, ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ, ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ, ರೈತ ಮೋರ್ಚಾ ಅಧ್ಯಕ್ಷ ಉಮೇಶ್ ಶೆಟ್ಟಿ, ಸೀತಾರಾಮ ಗೌಡ , ಮುರಳಿ ಭಟ್, ಮನೋಹರ ಕುಕ್ಕಿಲ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಬೆಳಿಗ್ಗೆ ಕುಕ್ಕಿಲದ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ ವೃದ್ಧ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಬಿದ್ದಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಅವರಿಗೆ ಪ್ರಾಥಮಿಕ ಶುಶ್ರೂಷೆ ನೀಡಿ, ವಿಟ್ಲದ ಆಪದ್ಬಾಂಧವ ಮುರಳಿ ವಿಟ್ಲ ಅವರಿಗೆ ಮಾಹಿತಿ ತಲುಪಿಸಿದ್ದಾರೆ. ಬಳಿಕ ಅಂಬ್ಯುಲೆನ್ಸ್‌ ಮೂಲಕ ಅವರನ್ನು ವಿಟ್ಲಕ್ಕೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ವೃದ್ಧರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!