ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.
2013ರ ನವೆಂಬರ್ 18ರಂದು ಆರೋಪಿಗಳಾದ ಪ್ರಜ್ವಲ್, ಅರುಣ್ ಅಮೀನ್, ಆದಿತ್ಯ ಸಾಲ್ಯಾನ್ ಮತ್ತು ಅಬ್ದುಲ್ ರಿಯಾಝ್ ಎಂಬವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅದರಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಶುಕ್ರವಾರ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದಾರೆ.




