September 16, 2026

ಬಂಟ್ವಾಳ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ಆರೋಪ ಸಾಬೀತು: ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ

0
image_editor_output_image-1872126350-1785581524194

ಬಂಟ್ವಾಳ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಎರಡು ವರ್ಷ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣವು 2025ರ ಜೂನ್ 23ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ತನಿಖಾಧಿಕಾರಿಗಳಾದ ಪಿಎಸ್‌ಐ ಕೀರಪ್ಪ ಘಟಕಾಂಬಳೆ ಹಾಗೂ ಪಿಎಸ್‌ಐ ಕೃಷ್ಣಕಾಂತ ಪಾಟೀಲ್ ನಡೆಸಿ, ಆರೋಪಿತನಾದ ಮಣಿನಾಲ್ಕೂರು ನಿವಾಸಿ ಮೋನಪ್ಪ ನಾಯ್ಕ (52) ವಿರುದ್ಧ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್ ಜೆ.ಎಸ್. ಅವರು 2026ರ ಜುಲೈ 31ರಂದು ತೀರ್ಪು ಪ್ರಕಟಿಸಿ, ಆರೋಪಿಗೆ ವಿವಿಧ ಅಪರಾಧಗಳಿಗೆ ವಿಧಿಸಲಾದ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುವಂತೆ ಆದೇಶಿಸಿ, ಅಂತಿಮವಾಗಿ 2 ವರ್ಷ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಸಮರ್ಥವಾಗಿ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!