September 16, 2026

ಉಡುಪಿ: ಮಹಿಳೆಗೆ ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು

0
IMG-20260801-WA0167

ಉಡುಪಿ: ಉಡುಪಿಯ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೃತರನ್ನು ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ ಎಂದು ಗುರುತಿಸಲಾಗಿದ್ದು, ಅವರು ಹಿಂದೂ ಯುವ ಸೇನಾ ನಾಯಕ ಮಂಜು ಕೊಳ ಅವರ ಪತ್ನಿ. ಮಹಿಳೆ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಉಡುಪಿ ಸಂಚಾರ ಪೊಲೀಸರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!