September 16, 2026

ತೀರ್ಥಹಳ್ಳಿ: ವರುಣನ ಆರ್ಭಟಕ್ಕೆ ಗುಡ್ಡ ಕುಸಿತ: ಒಂದೇ ಕುಟುಂಬದ ಮೂವರು ಮೃತ್ಯು

0
IMG-20260802-WA0011

ಶಿವಮೊಗ್ಗ: ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರ ಬೆಳಗಿನ ಜಾವ 2:30ರ ವೇಳೆ ನಡೆದಿದೆ.

ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಎಂದು ಗುರುತಿಸಲಾಗಿದೆ.

ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!